ರಷ್ಯಾ ತೈಲ ಖರೀದಿ ವಿಷಯದಲ್ಲಿ ಹಾಗೂ ಶೇ.50 ಪ್ರತೀಕಾರ ತೆರಿಗೆ ಹೇರಿಕೆ ವಿಚಾರದಲ್ಲಿ ಕಳೆದ 3 ತಿಂಗಳಿನಿಂದ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಲೇ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿಢೀರ್ ಮೆತ್ತಗಾಗಿದ್ದಾರೆ.
ಭಾರತ, ಚೀನಾ ಹಾಗೂ ರಷ್ಯಾ ದೇಶಗಳ ಮುಖ್ಯಸ್ಥರು ಇತ್ತೀಚೆಗೆ ಚೀನಾದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಂತೆಯೇ ವಿಚಲಿತರಾದಂತೆ ಕಂಡುಬಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ನಾವು ಭಾರತ ಮತ್ತು ರಷ್ಯಾವನ್ನು ಕರಾಳ ಚೀನಾದಿಂದಾಗಿ ಕಳೆದುಕೊಂಡಂತೆ ಕಾಣುತ್ತಿದೆ.
ಮತ್ತೆ ಭಾರತದ ವಿರುದ್ಧ ಸಿಡಿದೆದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಭಾರತ ಅಮೆರಿಕದ ಮೇಲಿನ ತೆರಿಗೆಯನ್ನು ಶೂನ್ಯಕ್ಕಿಳಿಸುವ ಆಫರ್ ನೀಡಿದೆ. ಆದರೆ ಸಮಯ ಮೀರಿಹೋಗುತ್ತಿದೆ. ವರ್ಷಗಳ ಮೊದಲೇ ಭಾರತ ಈ ಕೆಲಸ ಮಾಡಬೇಕಿತ್ತು’ ಎಂದು ಗುಡುಗಿದ್ದಾರೆ.
ಟ್ರಂಪ್‌ರ ವ್ಯಾಪಾರ ನೀತಿ ಸಲಹೆಗಾರ ಪೀಟರ್ ನವರೋ ಅವರು ಮತ್ತೆ ಭಾರತದ ವಿರುದ್ಧ ಹರಿಹಾಯ್ದಿದ್ದಾರೆ. ಈ ಬಾರಿ ಅವರು ರಷ್ಯಾ ತೈಲ ಖರೀದಿಯಿಂದ ಇಡೀ ದೇಶ ನಷ್ಟ ಅನುಭವಿಸುತ್ತಿದ್ದರೆ, ಬ್ರಾಹ್ಮಣ ರಷ್ಟೇ ಲಾಭ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಹೇಳಿದ್ದಾರೆ.