ಭಾರತದ ಆರ್ಥಿಕತೆ ನಿರ್ಜೀವವಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ, ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ಬಹಿರಂಗಪಡಿಸಿದೆ.
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಾಕಾರಗೊಳ್ಳುವ ಲಕ್ಷಣ ಕ್ಷೀಣ ಆಗುತ್ತಿದ್ದಂತೆಯೇ ‘ಆಗಸ್ಟ್ 1ರಿಂದ ಭಾರತ ಶೇ. 25ರಷ್ಟು ಸುಂಕ ಪಾವತಿಸಬೇಕಾಗುತ್ತದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಆರಂಭವಾದ ಆಪರೇಷನ್ ಸಿಂದೂರ ಕಾರ್ಯಾಚರಣೆ ಕುರಿತ ಚರ್ಚೆಯಲ್ಲಿ ಕಾಂಗ್ರೆಸ್ ಸಂಸದ ಗೌರವ್ ಗಗೋಯ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು
‘ಅಮೆರಿಕ ಮೊದಲು’ ನೀತಿಯ ಬೆಂಬಲಿಗರಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತೀಯರು ಸೇರಿದಂತೆ ವಿದೇಶಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಬದಲು ಆ ಅವಕಾಶವನ್ನು ಅಮೆರಿಕನ್ನರಿಗೆ ನೀಡುವಂತೆ ದೈತ್ಯ ಟೆಕ್ ಕಂಪನಿಗಳಾದ ಗೂಗಲ್, ಮೈಕ್ರೊಸಾಫ್ಟ್‌ಗೆ ಆದೇಶಿಸಿದ್ದಾರೆ.
ಪಹಲ್ಗಾಂ ದಾಳಿ ಬಳಿಕ ನಡೆದ ಭಾರತ ಮತ್ತು ಪಾಕ್ ನಡುವಿನ ಸಂಘರ್ಷದಲ್ಲಿ 4-5 ಯುದ್ಧವಿಮಾನಗಳು ನಾಶವಾಗಿವೆ ಎಂದು ಹೇಳಿ ಇದೀಗ ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಹೇಳಿದ್ದಾರೆ. ಆದರೆ ಸ್ಪಷ್ಟಪಡಿಸಿಲ್ಲ.
ಜೆಫ್ರಿ ಎಪ್ಸ್ಟೀನ್ ಜತೆಗಿನ ವ್ಯವಹಾರಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ವರದಿ ಪ್ರಕಟಿಸಿದ್ದ ಪ್ರತಿಷ್ಠಿತ ದಿ ವಾಲ್ ಸ್ಟ್ರೀಟ್ ಜರ್ನಲ್ ಮತ್ತು ಮಾಧ್ಯಮ ದೊರೆ ರೂಪರ್ಟ್ ಮರ್ಡೋಕ್ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 80 ಸಾವಿರ ಕೋಟಿ ರು. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ‘ರಷ್ಯಾ ಭೂಪ್ರದೇಶದ ತೀರಾ ಒಳ ನುಗ್ಗಿ ರಾಜಧಾನಿ ಮಾಸ್ಕೋ ಮೇಲೆ ದಾಳಿ ನಡೆಸಿದರೆ ನೆರವು ನೀಡುತ್ತೇವೆ’ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಜೆಲೆನ್‌ಸ್ಕಿ ಅವರಿಗೆ ಖಾಸಗಿಯಾಗಿ ಪ್ರೋತ್ಸಾಹ ನೀಡಿದ್ದಾರೆ ಎಂದು ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆ ವರದಿ