ಕ್ಷೇತ್ರಗಳ ಮರುವಿಂಗಡಣೆ ವಿಚಾರದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಏನು ಹೇಳುತ್ತಿದ್ದಾರೆಂಬುದು ಮುಖ್ಯವೇ ಹೊರತು ಕೆ.ಅಣ್ಣಾಮಲೈ ಏನು ಹೇಳಿದ್ದಾರೆಂಬುದು ಅಲ್ಲ. ಪಾಪ, ಅಣ್ಣಾಮಲೈ ಅವರಿಗೆ ಏನೂ ಗೊತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಭಾರತದ ಶಾಸಕರ ಸಂಪತ್ತಿನ ಕುರಿತ ವರದಿಯೊಂದು ಬಿಡುಗಡೆಯಾಗಿದ್ದು, ಮುಂಬೈನ ಘಾಟ್ಕೋಪರ್ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್ ಶಾ 3383 ಕೋಟಿ ರು. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1413 ಕೋಟಿ ರು. ಆಸ್ತಿಯೊಂದಿಗೆ 2ನೇ ಸ್ಥಾನ
ಡಿ.ಕೆ.ಶಿವಕುಮಾರ್ ಅವರೇ ಏನಿವತ್ತು ಬಹಳ ಪ್ರಸನ್ನವದನರಾಗಿದ್ದೀರಿ, ನಿನ್ನೆ ತಾನೆ ಶಾಸಕರಿಗೆ ಔತಣಕೂಟ ನೀಡಿದ್ದೀರಿ. ಏನಾದ್ರೂ ಶುಭ ಶಕುನ ಸಿಕ್ಕಿದೆಯಾ? ನಮ್ಮ ಬಳಿಯೂ ಸ್ವಲ್ಪ ಆ ಆನಂದ ಹಂಚಿಕೊಳ್ಳಿ ಎಂದು ಕೆಲ ಬಿಜೆಪಿ ಸದಸ್ಯರು ಕಿಚಾಯಿಸಿದ ಘಟನೆ ವಿಧಾನ ಪರಿಷತ್‌ನಲ್ಲಿ ನಡೆಯಿತು.
‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ. ಮಿಟ್ಟಗಾನಹಳ್ಳಿ ತ್ಯಾಜ್ಯ ಘಟಕವನ್ನು ನಾಲ್ಕು ಕಡೆಗೆ ವರ್ಗಾಯಿಸೋಣ ಎಂದರೆ ಆಗುತ್ತಿಲ್ಲ. ಒಂದೆಡೆ ಪ್ರಕರಣ ನ್ಯಾಯಾಲಯದಲ್ಲಿದೆ.