ಲೋಕಸಭಾ ಚುನಾವಣೆಯಲ್ಲಿ 8 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಗೆಲುವಿಗೆ ಮುನ್ನೋಟ ಬರೆದಿದ್ದೀರಿ. ಅಧಿಕಾರ ನಶ್ವರ, ಮತದಾರನೇ ಈಶ್ವರ ಅಂತ ನಿಮ್ಮ ಮುಂದೆ ಬಂದಿದ್ದೀವಿ, ಯಾಸೀರ್ ಖಾನ್ ಪಠಾಣ್ ಗೆಲ್ಲಿಸಿಕೊಡಿ, ನಿಮ್ಮ ಋಣ ತೀರಿಸ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
‘ಆರ್ಥಿಕವಾಗಿ ಈಡೇರಿಸಬಹುದಾದ ಭರವಸೆಗಳನ್ನು ಮಾತ್ರ ನೀಡಬೇಕು’ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ ₹10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ.