ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಡಿ.ಕೆ.ಶಿ ವಿರುದ್ಧದ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಪ್ರಕಟಿಸಲಿದೆ.
ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಕ್ರಮವಾಗಿ ತನಿಖೆ, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.