ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಒಂದೇ ದಿನದಲ್ಲಿ ಪ್ರಧಾನಿ ಮೋದಿ ಅವರ ಕೈಯಿಂದ ಮೇಕೆದಾಟು ಯೋಜನೆಗೆ ಸಹಿ ಹಾಕಿಸುವುದಾಗಿ ಹೇಳಿದ್ದರು. ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಗಿ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!
ಮುಂದಿನ 6 ತಿಂಗಳೊಳಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ.
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ ಮಾಡಿದರು