‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಹಾಗೂ ಅಧಿಕಾರ ಹಂಚಿಕೆ ಯಾವುದೂ ಇಲ್ಲ. ಇಂಥ ಯಾವುದೇ ಚರ್ಚೆಯೂ ನಡೆದಿಲ್ಲ. ಚರ್ಚೆ ನಡೆದಿದೆ ಎಂಬುದು ಗಾಳಿ ಸುದ್ದಿಯಷ್ಟೆ. ನವೆಂಬರ್ ಕ್ರಾಂತಿ ಸಾಧ್ಯತೆ ಅಲ್ಲಗಳೆದ ಉಪಮುಖ್ಯಮಂತ್ರಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪತ್ನಿ ಉಷಾ ಶಿವಕುಮಾರ್ ಗಣತಿದಾರರಿಗೆ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಚಾಲನೆ ನೀಡಿದರು. ಸಮೀಕ್ಷೆ ವೇಳೆ ಪ್ರಶ್ನೆಗಳ ಸರಮಾಲೆಗೆ ಡಿ.ಕೆ.ಶಿವಕುಮಾರ್ ಗಣತಿದಾರರ ಮೇಲೆ ಗರಂ ಆದರಲ್ಲದೆ, ಟೂ-ಮಚ್(ತುಂಬಾ) ಪ್ರಶ್ನೆ ಎಂದು ಆಕ್ಷೇಪವನ್ನೂ ವ್ಯಕ್ತಪಡಿಸಿದರು.
ಮುಂದಿನ ಎರಡು ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಪುನಃ ಹೇಳಿದ್ದಾರೆ, ಆದ್ದರಿಂದ ಡಿ.ಕೆ. ಶಿವಕುಮಾರ್ ಬಗ್ಗೆ ಅನುಕಂಪ ಉಂಟಾಗುತ್ತಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನಿಲ್ ವಿ.ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಪ್ತ ಶಾಸಕ ಡಾ. ರಂಗನಾಥ್ ಅವರು ಡಿಕೆಶಿ ಮುಖ್ಯಮಂತ್ರಿ ಆಗಲೆಂದು ನವರಾತ್ರಿಯ 9 ದಿನಗಳ ಕಾಲ ಉಪವಾಸ ವ್ರತ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ 12 ಸಾವಿರ ರಸ್ತೆ ಗುಂಡಿಗಳಿದ್ದು, ಅದರಲ್ಲಿ 7 ಸಾವಿರಕ್ಕೂ ಹೆಚ್ಚಿನ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.