ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.
ನಾನು ಕುಂಭಮೇಳದಲ್ಲಿ ಭಾಗವಹಿಸುವ ಕುರಿತು ಟೀಕೆ ಮಾಡುತ್ತಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕುಂಭಮೇಳದಲ್ಲಿ ಭಾಗಹಿಸುತ್ತಿರುವುದನ್ನು ಪ್ರಶ್ನಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಸ್ಪರ್ಧಿಸುವ ಇಚ್ಛೆ ಇತ್ತು. ಪಕ್ಷ ಅದಕ್ಕೆ ಒಪ್ಪಲಿಲ್ಲ - ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಒಂದೇ ದಿನದಲ್ಲಿ ಪ್ರಧಾನಿ ಮೋದಿ ಅವರ ಕೈಯಿಂದ ಮೇಕೆದಾಟು ಯೋಜನೆಗೆ ಸಹಿ ಹಾಕಿಸುವುದಾಗಿ ಹೇಳಿದ್ದರು. ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಗಿ ಹೇಳಿದ್ದಾರೆ.
ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಅಧಿಕಾರ ಸಿಕ್ಕಂತೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ನಾವು ಜನರ ಭಾವನೆಗಳಿಗಾಗಿ ರಾಜಕೀಯ ಮಾಡುತ್ತಿಲ್ಲ, ಜನರ ಬದುಕಿಗಾಗಿ ರಾಜಕೀಯ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
‘ಕೋವಿಡ್ ವೇಳೆ ಜನಸಾಮಾನ್ಯರ ಸಾವಿನ ನಡುವೆಯೂ ಹಿಂದಿನ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿ ನೂರಾರು ಕೋಟಿ ಹಣ ಲೂಟಿ ಮಾಡಿರುವುದು ನ್ಯಾ.ಕುನ್ಹಾ ವರದಿಯಲ್ಲಿ ಬಹಿರಂಗಗೊಂಡಿದೆ. ವರದಿಯ ಶಿಫಾರಸು ಆಧರಿಸಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಕೊರೋನಾ ಹಣ ತಿಂದ ಯಾರನ್ನೂ ಬಿಡುವುದಿಲ್ಲ’