ವಿಜಯೇಂದ್ರ ಇನ್ನೂ ಮುಂದುವರಿದು ಮಾತನಾಡಿದರೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಸರ್ಕಾರ ಚುನಾವಣೆಗೆ ಮುಂಚೆ ರಾಮನಗರದಲ್ಲಿ ಹೇಗೆಲ್ಲಾ ನಡೆದುಕೊಂಡಿತ್ತು ಎನ್ನುವುದು ಗೊತ್ತಿದೆ - ಎಚ್.ಡಿ.ಕುಮಾರಸ್ವಾಮಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಯಾರೂ ಸಹ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ಟಾರ್ಗೆಟ್ ಮಾಡುತ್ತೇವೆ ಎಂದರೆ ಅದು ಅವರ ಭ್ರಮೆ ಆಗಲಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದರು.