ಎಲ್ಲರ ಸಹಕಾರದಿಂದ ಮಾತ್ರ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಸಾಧ್ಯ
Nov 03 2025, 01:30 AM ISTಡ್ರಗ್ಸ್ ಮುಕ್ತ ಅಭಿಯಾನದ ಸಭೆಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳ ಉತ್ಸಾಹಕರಾಗಿದ್ದಾರೆ. ಇವರಿಗೆ ಶಕ್ತಿ ತುಂಬುವ ಕೆಲಸ ನಾವು ಮಾಡಬೇಕಾಗಿದೆ ಎಂದರು. ತಾಲೂಕಿನ ಎಲ್ಲಾ ಇಲಾಖೆಯ ಸಹಕಾರ ಮತ್ತು ಸಹಯೋಗದೊಂದಿಗೆ, ಕಲೆ, ಸಾಹಿತ್ಯ, ಕ್ರೀಡೆ, ಸಂಗೀತ ಮೂಲಕ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದರು. ಎಲ್ಲಾ ಸಮಾಜಗಳು ಒಂದುಗೂಡಿದರೆ ಮಾತ್ರವೇ ಡ್ರಗ್ಸ್ ಮುಕ್ತ ಸಕಲೇಶಪುರ ನಿರ್ಮಾಣ ಸಾಧ್ಯ ಎಂದು ಮಾಜಿ ಶಾಸಕ ಹಾಗೂ ಡ್ರಗ್ಸ್ ಮುಕ್ತ ಭಾರತ ಆಂದೋಲನದ ಪ್ರಮುಖರಲ್ಲಿ ಒಬ್ಬರಾದ ಮಾಜಿ ಶಾಸಕ ಎಚ್. ಎಂ. ವಿಶ್ವನಾಥ್ ಹೇಳಿದರು.