ರಾಜ್ಯ ಕಾಂಗ್ರೆಸ್ನಲ್ಲಿ ಆರಂಭವಾಗಿರುವ ಗೊಂದಲ ನಿವಾರಣೆ ಹಾಗೂ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ.15 ಅಥವಾ 16ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ.
ರಾಜ್ಯದ ರಾಜಕೀಯ ಇತಿಹಾಸದಲ್ಲಿ ದೇವರಾಜ್ ಅರಸು, ರಾಮಕೃಷ್ಣ ಹೆಗಡೆ, ಬಂಗಾರಪ್ಪ, ವೀರಪ್ಪ ಮೊಯ್ಲಿ ಇವರೆಲ್ಲರೂ ಅಧಿಕಾರದಲ್ಲಿದ್ದಾಗ ತನಿಖೆಯನ್ನು ಎದುರಿಸಿದವರೇ. ಆದರೆ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿಯಾಗಿ ಎಫ್ಐಆರ್ ಹಾಕಿಸಿಕೊಂಡವರು ಇಬ್ಬರು. ಯಡಿಯೂರಪ್ಪ ಮೊದಲನೆಯವರು, ಸಿದ್ದರಾಮಯ್ಯ ನಂತರದವರು.
ಮುಡಾ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದಾರೆ.