ಕಾರ್ಖಾನೆ ಅವ್ಯವಹಾರ ತನಿಖೆ ಬಗ್ಗೆ ಸಭೆಯಲ್ಲಿ ನಿರ್ಧಾರ:ಮೋಹನ ಹಿರೇಮಠ
Sep 23 2024, 01:30 AM IST ಕಿತ್ತೂರು ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೀರೇಶ ಹುಲಿಕಟ್ಟಿ ಅವ್ಯವಹಾರ ನಡೆಸಿದ್ದಾರೆಂದು ಕೆಲ ರೈತರು ಆರೋಪಿಸುತ್ತಿದ್ದು, ಪ್ರಕರಣದ ಕುರಿತು ತನಿಖೆ ನಡೆಸುವ ನಿಟ್ಟಿನಲ್ಲಿ ಸೆ.25ರಂದು ನಡೆಯುವ ವಾರ್ಷಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ ಹೇಳಿದರು.