ಬಿಜೆಪಿ ಅವಧಿಯ ಹಗರಣಗಳ ತನಿಖೆ ನಡೆಯಲಿದೆ
Jul 21 2024, 01:21 AM ISTಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದ ಕುರಿತು ಮುಖ್ಯಮಂತ್ರಿಗಳು ಸುಧೀರ್ಘವಾಗಿ ಮಾತನಾಡಿದ್ದಾರೆ. ಮುಡಾದಲ್ಲಿ ಯಾವುದೇ ಹಗರಣ ಆಗಿಲ್ಲ, ವಾಲ್ಮೀಕಿ ನಿಗಮದ ಹಗರಣ ತನಿಖೆ ಆಗುತ್ತಿದ್ದು, ಎಸ್ಐಟಿ, ಇಡಿ ತನಿಖೆ ಮಾಡುತ್ತಿವೆ. ಈಗಾಗಲೇ ಸಾಕಷ್ಟು ಹಣ ರಿಕವರಿ ಆಗಿದೆ, ಉಳಿದದ್ದು ರಿಕವರಿ ಆಗೋದು ಪಕ್ಕಾ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಹಗರಣಗಳು ನಡೆದಿದ್ದು, ಅವುಗಳನ್ನು ತನಿಖೆ ನಡೆಸುತ್ತೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.