ತನಿಖೆ ನಂತರ ಪ್ರತಾಪ್ ಸಾವಿನ ಸತ್ಯಾಸತ್ಯತೆ ಬಯಲು: ಎಸ್ಪಿ
Jul 09 2024, 12:46 AM ISTಕುಮಾರನಹಳ್ಳಿ- ಅರಕೆರೆ ಮಾರ್ಗಮಧ್ಯೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಕೆ.ಜಿ. ಪ್ರತಾಪ್ ಕುಮಾರ್ ಕಾರಿನಲ್ಲಿ ವಿಷ ಸೇವಿಸಿ, ಅಸ್ವಸ್ಥವಾಗಿರುವ ಬಗ್ಗೆ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಅಸ್ವಸ್ಥರಾಗಿದ್ದ ಪ್ರತಾಪ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.