ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವ
Jul 17 2024, 12:47 AM IST ಅರಸೀಕೆರೆ ತಾಲೂಕಿನ ಅಮರಗಿರಿ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀ ವೆಂಕಟರಮಣ ಜಾತ್ರಾ ಮಹೋತ್ಸವವು ಜು.೧೮ ಗುರುವಾರ ವಿಜೃಂಭಣೆಯಿಂದ ನೆರವೇರಲಿದೆ. ಆಷಾಢ ಮಾಸದ ದ್ವಾದಶಿಯಂದು ಜಾತ್ರಾ ಮಹೋತ್ಸವವನ್ನು ಪ್ರತಿ ವರ್ಷದಂತೆ ಆಯೋಜಿಸಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತಾದಿಗಳು ಜಾತ್ರಾ ಮಹೋತ್ಸವಕ್ಕೆ ಆಗಮಿಸಲಿದ್ದು, ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ವಿವಿಧ ಸಮಾಜಗಳು ಸೇರಿದಂತೆ ಸಮುದಾಯದವರು ಅನ್ನಸಂತರ್ಪಣೆ ಏರ್ಪಡಿಸಿದ್ದಾರೆ. ಜಾತ್ರೆಯಂದು ಅರಸೀಕೆರೆ ನಗರದಿಂದ ಕೆ.ಎಸ್.ಆರ್.ಟಿ.ಸಿ ವತಿಯಿಂದ ವಿಶೇಷ ಬಸ್ ಸಂಚಾರ ಏರ್ಪಡಿಸಲಾಗಿದೆ ಎಂದರು.