ಒಬಿಸಿ ಮೀಸಲಿಗೆ ತಡೆ: ತೆಲಂಗಾಣ ಬಂದ್ ಯಶಸ್ವಿ
Oct 19 2025, 01:03 AM ISTತೆಲಂಗಾಣ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗದವರಿಗೆ ಶೇ.42ರಷ್ಟು ಮೀಸಲಾತಿ ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ, ಮಧ್ಯಪ್ರವೇಶಕ್ಕೆ ಸುಪ್ರೀಂ ನಕಾರ ಹಿನ್ನೆಲೆಯಲ್ಲಿ ಶನಿವಾರ ತೆಲಂಗಾಣ ಬಂದ್‌ಗೆ ಕರೆ ನೀಡಲಾಗಿತ್ತು. ಬಂದ್ ಸಂಪೂರ್ಣ ಯಶಸ್ವಿಯಾಯಿತು. ಈ ವೇಳೆ ಕೆಲವು ಪ್ರತಿಭಟನಾಕಾರರು ಪೆಟ್ರೋಲ್ ಪಂಪ್ , ಕೆಲ ಅಂಗಡಿಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು.