ತರೀಕೆರೆ ಪುರಸಭೆ ತ್ಯಾಜ್ಯ ನಿರ್ವಹಣೆ ಘಟಕದ ಕೀರ್ತಿಗೆ ಮತ್ತೊಂದು ಹಿರಿಮೆ
Oct 23 2024, 12:39 AM ISTತರೀಕೆರೆ, ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಮನೆಗಳಿಂದ ಒಣ, ಹಸಿ ಕಸ ಸಂಗ್ರಹಿಸಿ, ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಕಸದಿಂದ ಗೊಬ್ಬರ ತಯಾರಿಕೆ ಘಟಕದ ಕಾರ್ಯವೈಖರಿಯಿಂದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿದ್ದ ತರೀಕೆರೆ ಪುರಸಭೆ ಕುವೆಂಪು ವಿಶ್ವವಿದ್ಯಾನಿಲಯ ಏರ್ಪಡಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಕಸ ವಿಲೇವಾರಿ, ಸ್ವಚ್ಛತೆ ಕುರಿತ ವಿಚಾರ ವಿನಿಮಯದ ಮೂಲಕ ಖ್ಯಾತಿಗೆ ಪಾತ್ರವಾಗಿತ್ತು. ಇದೀಗ ತರೀಕೆರೆ ಪುರಸಭೆಗೆ ತ್ಯಾಜ್ಯ ನಿರ್ವಹಣೆ, ಕಪ್ಪು ಸೈನಿಕ ಹುಳು ಮೊಟ್ಟೆ ಉತ್ಪಾದನಾ ಘಟಕ ಕಾರ್ಯ ಮುಖೇನ ಮತ್ತೊಮ್ಮೆ ಹೆಸರಾಗಿದೆ.