ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಸಿದ್ಧ

Nov 24 2023, 01:30 AM IST
ಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ರಾಷ್ಟ್ರೀಯ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಆಯಾ ತಾಲೂಕುಗಳ ಮತಗಟ್ಟೆಗಳಲ್ಲಿ ಸ್ಥಾಪಿಸಲಾಗಿರುವ ತಾಲೂಕು ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. ೯ರವರೆಗೆ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದವರೆಗೆ ಸ್ವೀಕರಿಸಲಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಾಮಾನುಸಾರ ಪರಿಶೀಲಿಸಿ ಡಿ. ೩೦ರಂದು ಅಂತಿಮ ಮತರದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.