ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರಿದಿದ್ದು, ಬುಧವಾರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.
ಫೆ.25ರಂದು ಮನೆಯಿಂದ ನಾಪತ್ತೆಯಾದ ದಿಗಂತ್ 11 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದ. ಬಳಿಕ ಆತನನ್ನು ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್‌ಲ್ಲಿ ಊಟದ ಹೊತ್ತಲ್ಲಿ ಹೆಚ್ಚಿನ ಚಪಾತಿಗಳನ್ನು ಕೆಲವರು ಕೊಂಡೊಯ್ದರೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.
ನಮ್ಮ ಊರಿನ ಹೆಸರನ್ನು ನಾವು ಹೇಗೆ ಇಟ್ಟುಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತಿಗೆ ಕಿಮ್ಮತ್ತು ನೀಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಹೇಳಿದ್ದಾರೆ.
ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಾದರೆ ತಮಿಳುನಾಡು 8 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದು ಆರೋಪಿಸಿದ್ದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪ ಪೂರ್ಣ ಸುಳ್ಳು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.