ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈದುಲ್ ಫಿತ್ರ್ ಸಡಗರ
Apr 01 2025, 12:48 AM ISTಪ್ರಾರ್ಥನೆ ಬಳಿಕ ಪರಸ್ಪರ ಹಸ್ತ ಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳಲ್ಲಿ ವಿಶೇಷ ಭೋಜನ ಬಳಿಕ, ನೆರೆಹೊರೆಯವರು, ಸಂಬಂಧಿಕರ ಮನೆಗೆ ತೆರಳಿ ಹಬ್ಬದ ಶುಭಾಶಯ ತಿಳಿಸಲಾಯಿತು. ಇದೇ ವೇಳೆ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಬಿರತ್ಗಾಗಿ ಪ್ರಾರ್ಥಿಸಿದರು. ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಸಂಭ್ರಮಿಸಿದರು.