ದನ ಕಳವು ಪ್ರಕರಣ: ಶಿವಮೊಗ್ಗದ ಇಬ್ಬರ ಬಂಧನ
Nov 09 2024, 01:20 AM ISTಪಟ್ಟಣ ವ್ಯಾಪ್ತಿಯ ಶಿವಪ್ಪನಾಯಕ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮೇ 27ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಲಕ್ಷ ಮೌಲ್ಯದ ಫಾರ್ಚೂನರ್ ಕಾರನ್ನು ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಇವರ ಸಹಚರ ಮಂಗಳೂರು ಮೂಲದ ವ್ಯಕ್ತಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.