ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಮಂದಿ ವಿರುದ್ಧ ಕೊಲೆ ಮತ್ತು ಅಪಹರಣ ಹಾಗೂ ಇನ್ನು ಮೂವರ ಮೇಲೆ ಸಾಕ್ಷ್ಯ ನಾಶ ಆರೋಪ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣಾಧೀನ ಬಂಧಿ, ನಟ ದರ್ಶನ್ ಸಿಗರೇಟ್ ಸೇದಿದ ಫೊಟೋ ವೈರಲ್ ಆದ ಬೆನ್ನಲ್ಲೇ ತಮಗೂ ಬೀಡಿ, ಸಿಗರೇಟ್ ಹಾಗೂ ತಂಬಾಕು ನೀಡುವಂತೆ ನಗರದ ಹಿಂಡಲಗಾ ಕಾರಾಗೃಹದಲ್ಲಿ ಭಾನುವಾರ ಕೈದಿಗಳು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಹಾಗೂ ಏಳನೇ ಆರೋಪಿ ಅನುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಜಾ ಮಾಡಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಒಬ್ಬಂಟಿಯಾದಂತಾಗಿದ್ದು, ತೀವ್ರ ಮಂಕಾಗಿದ್ದಾರೆ. ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ.
ದರ್ಶನ್ ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್ ಗ್ಲಾಸ್ ಧರಿಸಿರುವ ಹಿನ್ನೆಲೆ ಕರ್ತವ್ಯಲೋಪ ಎಸಗಿದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾರಾಗೃಹ ಮತ್ತು ಸುಧಾರಣೆ ಸೇವೆ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷ ಅವರು ಇಲಾಖೆಗೆ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಅವರ ನಾಲ್ವರು ಆಪ್ತರನ್ನು ಸಿನಿಮೀಯ ಶೈಲಿಯಲ್ಲಿ ಗುರುವಾರ ನಸುಕಿನಲ್ಲಿ ಬಿಗಿ ಭದ್ರತೆಯೊಂದಿಗೆ ಪೊಲೀಸರು ಸ್ಥಳಾಂತರಿಸಿ ನಿಟ್ಟುಸಿರು ಬಿಟ್ಟಿದ್ದಾರೆ.