ಜೈಲಿನಿಂದ ವಿಡಿಯೋ ಕರೆ ಮಾಡಿ ಮತ್ತೊಬ್ಬ ವ್ಯಕ್ತಿಯ ಜತೆಗೆ ಮಾತನಾಡಿರುವ ವಿಡಿಯೋ ಸಂಬಂಧ ಕೊಲೆ ಆರೋಪಿ ನಟ ದರ್ಶನ್ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.
ನಟ ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಟ ದರ್ಶನ್, ಅವರ ಗೆಳತಿ ಪವಿತ್ರ ಗೌಡ ಹಾಗೂ ಇತರ ಕೆಲವು ಸ್ನೇಹಿತರು ಆರೋಪಿಗಳಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ಅಂತಿಮಘಟ್ಟ ತಲುಪಿದ್ದು, ಪೊಲೀಸರು ಇದೇ ತಿಂಗಳ ಅಂತ್ಯದೊಳಗೆ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು 1ನೇ ಆರೋಪಿ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲು ಪೊಲೀಸರು ಮುಂದಾಗಿದ್ದಾರೆ.