ನಟ ದರ್ಶನ್ ವಿರುದ್ಧ ವೀರಶೈವ ಲಿಂಗಾಯತ ಸಮಾಜ ಪ್ರತಿಭಟನೆ
Jun 20 2024, 01:06 AM ISTಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ವಿರುದ್ಧ ಕೊಡಗಿನಲ್ಲಿಯೂ ಆಕ್ರೋಶ ವ್ಯಕ್ತವಾಗಿದ್ದು ವೀರಶೈವ ಲಿಂಗಾಯತ ಸಮಾಜ ಬುಧವಾರ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿದೆ. ತಾಲೂಕು ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಹಾಗೂ ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಲಾಯಿತು.