ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ನಟ ಚಿಕ್ಕಣ್ಣ ಅವರನ್ನು ಸುಮಾರು ಎರಡು ತಾಸು ಅಧಿಕ ಸಮಯ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.
ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂದರ್ಭದಲ್ಲಿ ನಟ, ಆರೋಪಿ ದರ್ಶನ್ ಧರಿಸಿದ್ದ ಬಟ್ಟೆಗಳು, ಶೂಗಳು ಸೇರಿ ಕೆಲ ವಸ್ತುಗಳನ್ನು ಜಪ್ತಿ ಮಾಡಿರುವ ಪೊಲೀಸರು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ರಕ್ತದ ಕಲೆಗಳು ಸೇರಿದಂತೆ ಇತರೆ ಪುರಾವೆಗಳ ಸಂಗ್ರಹಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್‌ಎಲ್) ತಜ್ಞರ ಸಹಕಾರದಲ್ಲಿ ಪೊಲೀಸರು ಲೂಮಿನಾರ್ ಪರೀಕ್ಷೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರರು ಸಿದ್ಧತೆ ನಡೆಸಿದ್ದರಾ? ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನೀಡಿರುವ ಹೇಳಿಕೆ ಇಂತದ್ದೊಂದು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ನಟ ದರ್ಶನ್ ಗ್ಯಾಂಗ್ನಿಂದ ಹಲ್ಲೆಗೆ ಒಳಗಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.