ನಾಲೆಗಳಿಗೆ ನೀರು ಬಿಡುಗಡೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
Mar 26 2024, 01:00 AM ISTಮಳೆ ಕೊರತೆ, ನೀರಿನ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದೆ. ರಾಜ್ಯದ ಕಾವೇರಿ ಕಣಿವೆ ರೈತರು ಹಾಗೂ ಜನರ ಹಿತ ಬಲಿಕೊಟ್ಟಿದೆ. ಜಲಾಶಯಗಳಲ್ಲಿ ಇದ್ದ ನೀರು ನೆರೆ ರಾಜ್ಯಕ್ಕೆ ಹರಿದ ಪರಿಣಾಮ ಇಲ್ಲಿನ ರೈತರು ಬೆಳೆ ಹಾಕದ ಪರಿಸ್ಥಿತಿ ನಿರ್ಮಾಣವಾಗಿದೆ, ಜಮೀನಿನಲ್ಲಿರುವ ಬೆಳೆ ಬಿರು ಬಿಸಿಲಿಗೆ ಒಣಗಿ ತರಗಾಗುತ್ತಿದೆ, ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುವಂತಾಗಿದೆ.