ತುಮಕೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಸನ್ನದ್ಧ
Oct 01 2024, 01:19 AM ISTತುಮಕೂರು: ತುಮಕೂರು ದಸರಾ ಉತ್ಸವ ಆಚರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದ್ದು, ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಮುಂಡೇಶ್ವರಿ ದೇವಿಯನ್ನು ಶರನ್ನವರಾತ್ರಿಯ ಮೊದಲ ದಿನ ಅಕ್ಟೋಬರ್ 3ರ ಬೆಳಿಗ್ಗೆ 5.30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ಪೂಜಿಸಲು ಬೇಕಾಗಿರುವ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.