ದಸರಾ; ಆಯುಧಪೂಜೆ ಆಚರಣೆಗೆ ಸಕ್ಕರೆ ನಗರ ಮಂಡ್ಯ ಸಜ್ಜುDasara; Sugar city Mandya gears up for Ayudha Puja celebrations
Oct 01 2025, 01:00 AM ISTಆಯುಧಪೂಜೆ ಹಬ್ಬದಲ್ಲಿ ಸಿಹಿ ತಿನಿಸುಗಳನ್ನು ಪೂಜೆಗೆ ಇಡುವುದರಿಂದ ಹಾಗೂ ಸಿಹಿ ತಿನಿಸುಗಳನ್ನು ವಿನಿಮಯ ಮಾಡಿಕೊಳ್ಳುವುದರಿಂದ ಅದಕ್ಕೂ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿರುವುದರಿಂದ ಬೆಲೆಯಲ್ಲೂ ಹೆಚ್ಚಳವಾಗಿದೆ. ಪ್ರತಿ ಕೆಜಿ ಬೂಂದಿ-೨೫೦ ರು., ಮಿಲ್ಕ್ ಬರ್ಫಿ-೬೦೦ ರು., ಹಾರ್ಲಿಕ್ಸ್ ಬರ್ಫಿ-೬೯೦ ರು., ಲಾಡು-೩೪೦ ರು., ಮೈಸೂರು ಪಾಕ್-೬೯೦ ರು., ಜಹಂಗೀರ್-೨೮೦ ರು., ಸೋಂಪಾಪುಡಿ-೬೦೦ ರು., ಬಾದೂಶಾ-೨೮೦, ಮೋತಿಪಾಕ್-೪೮೦, ಹಲ್ವಾ-೪೦೦ ರು. ಸೇರಿದಂತೆ ಅನೇಕ ಸಿಹಿ ಪದಾರ್ಥಗಳು ಮತ್ತು ಪ್ರತಿ ಕೆಜಿ ಸ್ಪೆಷಲ್ ಖಾರ-೩೮೦ ರು., ಸಾಮಾನ್ಯ ಖಾರ-೩೦೦ ರು.ವರೆಗೆ ಮಾರಾಟವಾಗುತ್ತಿದ್ದವು.