ನವರಾತ್ರಿ ಆಯುಧ ಪೂಜೆ ಮತ್ತು ವಿಜಯದಶಮಿ ಆಚರಣೆಗೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ನಡೆಯಿತು. ಬುಧವಾರ ಗುರುವಾರ ಸರ್ಕಾರಿ ರಜೆ ಇರುವುದರಿಂದ ಕೆಲವು ಕಚೇರಿಗಳು, ವ್ಯಾಪಾರಿ ಮಳಿಗೆ, ಗೋದಾಮು, ಫ್ಯಾಕ್ಟರಿ, ವಾಹನಗಳಿಗೆ ಮಂಗಳವಾರವೇ ಆಯುಧ ಪೂಜೆ ನೆರವೇರಿಸಲಿವೆ.