ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನಕ್ಕೆ ವಿರೋಧ
Sep 06 2025, 01:01 AM ISTಮೈಸೂರು ದಸರಾ ಹಬ್ಬದ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿಂದೂ ಜನಜಾಗೃತಿ ಸಮಿತಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕವು ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿನಿಧಿಸುವ ಅನೇಕ ಗಣ್ಯರನ್ನು ಹೊಂದಿದೆ. ಪದ್ಮಭೂಷಣ ಪುರಸ್ಕೃತ ಡಾ. ಭೈರಪ್ಪ ಅವರು ಭಾರತದ ಅತ್ಯುನ್ನತ ಸಾಹಿತ್ಯ ಸಮ್ಮಾನಗಳನ್ನು ಪಡೆದಿದ್ದಾರೆ. ಅವರ ಕೃತಿಗಳು ರಾಷ್ಟ್ರ ಮಟ್ಟದಲ್ಲಿ ಕೀರ್ತಿಯನ್ನು ತಂದಿವೆ. ಇಂತಹ ಕೀರ್ತಿಶಾಲಿ ವ್ಯಕ್ತಿಯನ್ನು ಕಡೆಗಣಿಸಿ, ವಿವಾದಾತ್ಮಕ ಅಭಿಪ್ರಾಯ ಹೊಂದಿರುವವರನ್ನು ಆಹ್ವಾನಿಸುವುದು ಸಮಂಜಸವಲ್ಲ ಎಂದರು.