ಉಚ್ಚಿಲ ದಸರಾ 2024 ಆಮಂತ್ರಣ ಪತ್ರಿಕೆ ಬಿಡುಗಡೆ
Aug 28 2024, 12:48 AM ISTಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ‘ಉಚ್ಚಿಲ ದಸರಾ -2024’ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.