ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ, ದಸರಾ,ದೀಪಾವಳಿ, ಕಾರ್ತಿಕ ಸೋಮವಾರ ವಿಶೇಷ ಪೂಜೆ
Oct 12 2023, 12:00 AM ISTಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮವಾಸ್ಯೆ, ದಸರಾ, ದೀಪಾವಳಿ, ಕಾರ್ತಿಕ ಸೋಮವಾರದಂದು ಜಾತ್ರಾ ಮಹೋತ್ಸವಗಳು, ವಿಶೇಷ ಪೂಜೆ, ಉತ್ಸವಾದಿಗಳು ನಡೆಯಲಿವೆ. ಅ. ೧೨ರಂದು ಮಹಾಲಯ ಜಾತ್ರೆ ಪ್ರಾರಂಭವಾಗಲಿದೆ. ೧೩ರಂದು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸವಾದಿಗಳು ಹಾಗೂ ೧೪ರಂದು ಮಹಾಲಯ ಅಮವಾಸ್ಯೆ ವಿಶೇಷ ಉತ್ಸವಾದಿಗಳು ಜರುಗಲಿವೆ.