ಕೆರೆ ಒತ್ತುವರಿ ಮಾಡಿ ಕಾನೂನು ಬಾಹಿರವಾಗಿ ದಾಖಲೆ ತಿದ್ದುಪಡಿ

Jul 17 2025, 12:30 AM IST
ಸರ್ಕಾರಿ ಕೆರೆಯನ್ನು ಅಕ್ರಮವಾಗಿ ಒತ್ತುವರಿ ಮತ್ತು ಕಾನೂನುಬಾಹಿರವಾಗಿ ಕಂದಾಯ ಇಲಾಖೆ ದಾಖಲೆ ತಿದ್ದುಪಡಿ ಮಾಡಿ ಖಾತೆ ಮಾಡಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಡಿಸಿ ಕಚೇರಿ ಆವರಣದಲ್ಲಿ ಹೊಳೆನರಸೀಪುರ ತಾಲೂಕಿನ ಶ್ರವಣೂರು ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಳ್ಳಿ ಮೈಸೂರು ಹೋಬಳಿ ಬಂಟರತಳಾಲು ಗ್ರಾಮದ ನಿವಾಸಿ ಬಿ.ಜೆ. ಮಂಜೇಗೌಡ ಇವರು ಸರ್ಕಾರಿ ಕೆರೆಯನ್ನು ಒತ್ತುವರಿ ಮಾಡಿ ಬೆಳೆಯನ್ನು ಹಾಕಿರುತ್ತಾರೆ. ಸರ್ಕಾರಿ ಕೆರೆಯಲ್ಲಿ ನೀರಿನ ಮಟ್ಟವು ತುಂಬಾ ಕಡಿಮೆ ಇದ್ದು, ಗ್ರಾಮಸ್ಥರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತುಂಬಾ ಸಮಸ್ಯೆಯಾಗಿರುತ್ತದೆ ಎಂದರು.