ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.
ಗ್ರಾಮಗಳಲ್ಲಿ ಮನೆಮನೆಗೂ ನಲ್ಲಿಗಳ ಮೂಲಕ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆ ಇದೀಗ 16 ಕೋಟಿ ಗ್ರಾಮೀಣ ಮನೆಗಳಿಗೆ ಕುಡಿವ ನೀರು ಒದಗಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಉದ್ದ ಜಿಗಿತದಲ್ಲಿ ಮೈಸೂರು ವಿಭಾಗದ ಜಿ. ಪವಿತ್ರಾ ಚಿನ್ನ ಸಂಪಾದಿಸಿದರು. ಆರ್. ಪ್ರಿಯಾಂಕ ಬೆಳ್ಳಿಗೆದ್ದು ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟರು. ಮೈಸೂರು ವಿಭಾಗವು ಒಟ್ಟು 8 ಚಿನ್ನ, 10 ಬೆಳ್ಳಿ, 8 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿತು.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ಮೂಲಕ ಹೊಸ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.