ನಕಲಿ ದಾಖಲೆ ಸೃಷ್ಟಿಸಿ ಎನ್ಆರ್ಜಿಯಲ್ಲಿ ಗೋಲ್ಮಾಲ್
Feb 21 2025, 11:48 PM ISTಕನಕಗಿರಿ ತಾಲೂಕಿನ ಕರಡೋಣಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಸರ್ವೇ ನಂ. 43 ಹಾಗೂ ಸರ್ವೇ 16, 17, 08, 64ರಲ್ಲಿ ಕೃಷಿ ಇಲಾಖೆಯಿಂದ ಹೊಲಗಳಲ್ಲಿ ಬದು ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿತ್ತು. ಇದನ್ನು ಅರಿತ ವಂಚಕರು ರೈತರಾದ ಮೇಜಾನ್ ರಾಜಸಾಬ್, ಜಿಲಾನಿಸಾಬ್ ಅಬ್ದುಲ್ ಸಾಬ್, ರಜಾಕ್ ರಾಜಾಸಾಬ್ ಎನ್ನುವರ ಪಹಣಿ ಪಡೆದು ಇವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕಾಮಗಾರಿ ಪೂರ್ಣಗೊಳಿಸಲಾಗಿದೆ.