• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ : ಕೋಳಿ-ಮಾಂಸ ಮಾರಾಟ ಅಂಗಡಿಗಳ ಸುತ್ತ ಸ್ವಚ್ಚತೆ ಕಾಪಾಡಿ

Apr 03 2024, 01:38 AM IST

ಚನ್ನಗಿರಿ ಪಟ್ಟಣದ ಸಂತೆ ಮೈದಾನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಪಕ್ಕದ ಕೋಳಿ ಅಂಗಡಿಗಳಿಂದ ಪರಿಸರ ಕಲುಷಿತಗೊಳ್ಳುತ್ತಿದೆ. 

ದಾವಣಗೆರೆ ಬಂಡಾಯ ಬಗೆಹರಿಸಿದ ಬಿಎಸ್‌ವೈ

Mar 27 2024, 02:03 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಉದ್ಭವಿಸಿದ್ದ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಬಿಎಸ್‌ವೈ ರಂಗ ಪ್ರವೇಶ, ದಾವಣಗೆರೆ ಬಿಜೆಪಿ ಅತೃಪ್ತಿ ಶಮನ

Mar 27 2024, 01:03 AM IST
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸುವಂತೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಪಟ್ಟು ಹಿಡಿದಿದ್ದ ಗುಂಪಿನ ಅಸಮಾಧಾನ ತಣಿಸುವ ಮೂಲಕ ಉತ್ತರ ಕರ್ನಾಟಕದ ಹೆಬ್ಬಾಗಿಲಾದ ದಾವಣಗೆರೆಯಲ್ಲಿ ಬಿಜೆಪಿಯನ್ನು ಎಲ್ಲರೂ ಸೇರಿ ಗೆಲ್ಲಿಸುವಂತೆ ಮನವೊಲಿಸುವ ಮೂಲಕ ಎಲ್ಲ ಗೊಂದಲ, ಗದ್ದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿದ್ದಾರೆ.

ದಾವಣಗೆರೆ ಬಿಜೆಪಿ ಅಭ್ಯರ್ಥಿ ಬದಲಾವಣೆ ಪಟ್ಟು ಸಡಿಲಿಸಲ್ಲ

Mar 26 2024, 01:20 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಬೇಕೆಂಬ ಪ್ರಮುಖ ಬೇಡಿಕೆಯನ್ನೇ ಬಿಜೆಪಿ ರಾಜ್ಯ ನಾಯಕರು ಭೇಟಿ ನೀಡಿದ ವೇಳೆ ಮುಂದಿಡಲು ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನೇತೃತ್ವದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಗಟ್ಟಿ ನಿಲುವು ಕೈಗೊಳ್ಳಲಾಯಿತು.

ಹೋಳಿ ಬಣ್ಣಗಳಲ್ಲಿ ಮಿಂದೆದ್ದ ದಾವಣಗೆರೆ

Mar 26 2024, 01:16 AM IST
ಹೋಳಿ ಹಬ್ಬದ ಬಣ್ಣದಲ್ಲಿ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ಜನತೆ ಸೋಮವಾರ ಮಿಂದೆದ್ದರು. ಮಕ್ಕಳು, ವಯಸ್ಕರು ಎಂಬ ಬೇಧಭಾವ ಮರೆತು, ಉತ್ಸಾಹದಿಂದ ಬಣ್ಣಗಳೊಂದಿಗೆ ಹೋಳಿ ಆಟ ಆಡಿದರು. ಬೆಳಗ್ಗೆಯಿಂದಲೇ ಮಕ್ಕಳು, ಮಹಿಳೆಯರು, ಯುವಕ- ಯುವತಿಯರು ತಮ್ಮ ಸ್ನೇಹಿತರು, ಬಂಧು, ಬಳಗ, ನೆರೆ ಹೊರೆಯವರೊಂದಿಗೆ ಹೋಳಿ ಸಂಭ್ರಮದಲ್ಲಿ ಭಾಗಿಯಾದರು.

ದಾವಣಗೆರೆ ವಿವಿಧೆಡೆ ಕಾಮದಹನ ಸಂಪನ್ನ

Mar 25 2024, 12:52 AM IST
ದಾವಣಗೆರೆ ನಗರದಲ್ಲಿ ಹೋಳಿ ಹುಣ್ಣಿಮೆ ಅಂಗವಾಗಿ ಭಾನುವಾರ ವಿವಿಧೆಡೆ ಕಾಮದಹನ ಆಚರಿಸಲಾಯಿತು. ಕಟ್ಟಿಗೆ, ಕುಳ್ಳು, ಮರಗಳ ಹಲಗೆ, ತೆಂಗಿನಗರಿ ಇತ್ಯಾದಿ ಉರುವಲುಗಳನ್ನು ಒಪ್ಪವಾಗಿ ಜೋಡಿಸಿ, ಕಾಮನ ಚಿತ್ರಪಟವನ್ನು ಇಟ್ಟು ಕಾಮನಿಗೆ ಪೂಜೆ ಸಲ್ಲಿಸಿದರು. ಬಳಿಕ ಕೊಳ್ಳಿಯಿಡಲಾಯಿತು. ಈ ವೇಳೆ ಯುವಕರು ಕೇಕೆ ಹಾಕಿ ಕುಣಿದರು. ಈ ಸಂದರ್ಭ ಸಾರ್ವಜನಿಕರಿಗೆ ಕಾರ-ಮಂಡಕ್ಕಿ ಪ್ರಸಾದ ವಿತರಿಸಲಾಯಿತು.

ನಾಲ್ಕು ದಿನವಾದ್ರೂ ದಾವಣಗೆರೆ ತಲುಪದ ಭದ್ರೆ ನೀರು: ಪ್ರತಿಭಟನೆ

Mar 25 2024, 12:45 AM IST
ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸಿ, 4 ದಿನಗಳೇ ಕಳೆದರೂ ದಾವಣಗೆರೆ ತಾಲೂಕಿನ ಭಾಗಕ್ಕೆ ಇಂದಿಗೂ ನೀರು ತಲುಪಿಲ್ಲ. ಈ ಹಿನ್ನೆಲೆಯಲ್ಲಿ ನಗರದ ಹೊರವಲಯದ ಕುಂದುವಾಡ ಗ್ರಾಮದ ಬಳಿ ಭದ್ರಾ ಕಾಲುವೆಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ.

ದಾವಣಗೆರೆ ಟಿಕೆಟ್‌: ಬಿಜೆಪಿಯಲ್ಲಿ ಇನ್ನೂ ಶಮನವಾಗದ ಭಿನ್ನಮತ

Mar 18 2024, 01:51 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಇನ್ನೂ ಶಮನವಾಗಿಲ್ಲ. ಟಿಕೆಟ್‌ ವಿಚಾರವಾಗಿ ನಗರದಲ್ಲಿ ಭಾನುವಾರ ಅಸಮಾಧಾನಿತರ ಗುಂಪಿನ ಸಭೆ ನಡೆದು, ಜಿ.ಎಂ.ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ನೀಡಿದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮೇ 7ಕ್ಕೆ ಮತ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌

Mar 17 2024, 01:47 AM IST
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏ.20 ನಾಮಪತ್ರ ಪರಿಶೀಲಿಸುವ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಏ.22ರ ಕಡೇ ದಿನವಾಗಿದೆ. ಮತದಾನ ಮೇ 7ರಂದು ನಡೆಯಲಿದೆ ಎಂದು ಹೇಳಿದರು.

ಇಂದು ದಾವಣಗೆರೆ ವಿವಿ 11ನೇ ಘಟಿಕೋತ್ಸವ

Mar 12 2024, 02:05 AM IST
ದಾವಿವಿಯ ಒಟ್ಟು 9 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಪಡೆದರೆ, 12 ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ. 20 ವಿದ್ಯಾರ್ಥಿಗಳು 2 ಮತ್ತು 3ನೇ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 2177 ವಿದ್ಯಾರ್ಥಿಗಳು ಹಾಜರಾಗಿದ್ದು, 2092 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.96.09 ಫಲಿತಾಂಶ ಲಭಿಸಿದೆ. ಈ ಪೈಕಿ 778 ವಿದ್ಯಾರ್ಥಿಗಳು, 1314 ವಿದ್ಯಾರ್ಥಿನಿಯರು ಸ್ನಾತಕೋತ್ತರ ಪದವಿಗೆ ಭಾಜನರಾಗಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved