ದಾವಣಗೆರೆ ವೃತ್ತಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಆಯ್ಕೆ
Aug 14 2024, 12:53 AM ISTದಾವಣಗೆರೆ ವೃತ್ತಿ ರಂಗಾಯಣಕ್ಕೆ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ, ಲೇಖಕ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ 2 ವರ್ಷಗಳಿಂದಲೂ ಖಾಲಿ ಇದ್ದ ದಾವಣಗೆರೆ ವೃತ್ತಿ ರಂಗಾಯಣ ನಿರ್ದೇಶಕರ ಹುದ್ದೆಗೆ ಮುಂದಿನ 3 ವರ್ಷಗಳ ಅವಧಿಗೆ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಲಾಗಿದೆ.