ರಸ್ತೆ, ಡಿವೈಡರ್, ವಿದ್ಯುತ್ ದೀಪ ಕಾಮಗಾರಿಗಳ ಪರಿಶೀಲನೆ
Nov 15 2024, 12:33 AM ISTಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿರುವ ರಸ್ತೆ ಕಾಮಗಾರಿ, ರಸ್ತೆ ಡಿವೈಡರ್, ರೋಡ್ ಲೈಟ್ ಕಾಮಗಾರಿಗಳು ಕಳಪೆಯಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ತಾಲೂಕಿನ ಭ್ರಷ್ಟಾಚಾರ ವಿರೋಧಿ ವೇದಿಕೆ ಕಾರ್ಯದರ್ಶಿ ಸೊರಟೂರು ಹನುಮಂತಪ್ಪ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಮಂಗಳವಾರ ಲೋಕಾಯುಕ್ತ ಸಂಸ್ಥೆ ಮುಖ್ಯ ಅಭಿಯಂತರರಾದ ಶುಭ ಟಿ. ಅವಳಿ ತಾಲೂಕುಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಸ್ಥಳ ಪರೀಶೀಲನೆ ನಡೆಸಿದ್ದಾರೆ.