ಬೆಂಗಳೂರಿನಲ್ಲಿ ಪರ್ವ ರಿಯಲ್ ಎಸ್ಟೇಟ್ ಆಯೋಜಿಸಿರುವ ಎರಡು ದಿನಗಳ ದುಬೈ ರಿಯಲ್ ಎಸ್ಟೇಟ್ ಎಕ್ಸ್ ಪೋಗೆ ಶನಿವಾರ ಅದ್ಧೂರಿ ಚಾಲನೆ ದೊರೆತಿದೆ.
ಚಿನ್ನ ಕಳ್ಳ ಸಾಗಣೆ ಸಂಬಂಧ ಡಿಜಿಪಿ ಮಲಮಗಳೂ ಆಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ, ಏಟ್ರಿಯಾ ಹೋಟಲ್ ಮಾಲೀಕರ ಮೊಮ್ಮಗ ತರುಣ್ ರಾಜು ಅವರು 25 ಬಾರಿ ದುಬೈಗೆ ಒಟ್ಟಿಗೆ ಪ್ರಯಾಣಿಸಿದ್ದರು ಎಂಬ ವಿಚಾರ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ತನಿಖೆಯಲ್ಲಿ ಬಯಲಾಗಿದೆ.
ನಟಿ ರನ್ಯಾ ರಾವ್ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುವ ವೇಳೆ ತನ್ನ ಸ್ನೇಹಿತ ಹಾಗೂ ಪಾಲುದಾರ ತರುಣ್ ರಾಜ್‌ನ ಅಮೆರಿಕ ಪಾಸ್‌ಪೋರ್ಟ್ ಬಳಸಿಕೊಂಡಿರುವುದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ರನ್ಯಾ ರಾವ್ ಚಿನ್ಮ ಸ್ಮಗ್ಲಿಂಗ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಕಳೆದ ಐದು ವರ್ಷಗಳಿಂದ ಕನ್ನಡ ಚಲನಚಿತ್ರ, ಕಿರುತೆರೆಯ ಕೆಲ ನಟಿಯರನ್ನು ಬಳಸಿಕೊಂಡು ವಿದೇಶದಿಂದ ಕಳ್ಳ ಹಾದಿಯಲ್ಲಿ ಚಿನ್ನ ಸಾಗಿಸುವ ಜಾಲವೊಂದು ಸಕ್ರಿಯವಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಶೀಘ್ರವೇ 15 ಜನ ಕಾಂಗ್ರೆಸ್ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.