ದಲಿತರ ದೇಗುಲ ಪ್ರವೇಶ ವಿವಾದ: ಶಾಂತಿ ಸಭೆ ವಿಫಲ
Nov 11 2024, 11:46 PM ISTಭಾನುವಾರ ಶ್ರೀಕಾಲಭೈರವೇಶ್ವರಸ್ವಾಮಿ ದೇವಸ್ಥಾನಕ್ಕೆ ದಲಿತರು ಪ್ರವೇಶಿಸುವುದನ್ನು ಸವರ್ಣೀಯರು ತೀವ್ರವಾಗಿ ವಿರೋಧಿಸಿದ್ದರು. ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದರಿಂದ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪೊಲೀಸ್ ರಕ್ಷಣೆಯಲ್ಲಿ ದೇಗುಲದೊಳಗೆ ದಲಿತರಿಗೆ ಪ್ರವೇಶಾವಕಾಶ ಕಲ್ಪಿಸಿದ್ದರು. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನೆಲೆಸಿತ್ತು.