ವಿವಿ ಉಳಿಸಿಕೊಳ್ಳಲು ಪಕ್ಷಾತೀತ, ಜಾತ್ಯತೀತ ಹೋರಾಟ ಅಗತ್ಯ: ಆನಂದ ದೇವರು
Mar 07 2025, 12:53 AM ISTಬಡ, ಹಿಂದುಗಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯಲು ಬಾಗಲಕೋಟೆ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ನಡೆಸಬೇಕಿದೆ ಎಂದು ಓಲೇಮಠದ ಆನಂದ ದೇವರು ಹೇಳಿದರು. ನಗರದ ಎ.ಜಿ. ದೇಸಾಯಿ ವೃತ್ತದ ಹತ್ತಿರ ಬಾಗಲಕೋಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ನಗರದ ಎಲ್ಲ ಕಾಲೇಜಿನ ವಿದ್ಯಾರ್ಥಿಗಳು ಬಾಗಲಕೋಟೆ ವಿಶ್ವವಿದ್ಯಾಲಯ ರದ್ದು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.