ಬಿಜೆಪಿ ದೇವರು, ಧರ್ಮದ ಮೊರೆ ಹೋಗಿದೆ
Mar 05 2024, 01:30 AM ISTವಿಜಯಪುರ: ಬಿಜೆಪಿ ನುಡಿದಂತೆ ನಡೆಯದೇ ದೇವರು, ಧರ್ಮದ ಮೊರೆ ಹೋಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಪ್ರೊ.ರಾಜು ಆಲಗೂರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2024ರ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಬಡವರ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗುತ್ತಿದೆ