ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು.
ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಕುರಿತು ಚಾಮುಂಡೇಶ್ವರಿ ಕ್ಷೇತ್ರದ ಜನ ನಿರ್ಧಾರ ಮಾಡ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದಲ್ಲಿ ಶಾಸಕನಾದ ನನ್ನ ಪ್ರಭಾವ ಬಳಸಿ ಮಹೇಂದ್ರ 19 ಸೈಟ್ ಪಡೆದಿರುವ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ ಎಂದು ಶಾಸಕ ಜಿ.ಟಿ.ದೇವೇ ಗೌಡ ಪ್ರತಿಕ್ರಿಯಿಸಿದ್ದಾರೆ.
ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿರುವುದು ಭವಿಷ್ಯ ಅಲ್ಲ, ವಾಸ್ತವ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪುನರುಚ್ಚರಿಸಿದರು.
ದ್ವೇಷದ ರಾಜಕಾರಣ ಹಾಗೂ ಇನ್ನೊಬ್ಬರನ್ನು ಮುಗಿಸೋದರಲ್ಲಿ ದೇವೇಗೌಡರು ನಂಬರ್ 1. ಅವರು ಯಾವುದೇ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡಲ್ಲ.
ಶತ್ರುವಿನ ಶತ್ರು ಮಿತ್ರ ಎಂಬ ಮಾತಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯೇ ಸಾಕ್ಷಿ. ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದರು.