ನಕಲಿ ಪತ್ರಕರ್ತರಿಗೆ ಕಡಿವಾಣ ಅತ್ಯಗತ್ಯ
Jul 29 2024, 12:49 AM ISTಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತರು ಎಂದು ಹೇಳಿ ಬ್ಲಾಕ್ಮೇಲ್ ಮಾಡುವವರ ಸಂಖ್ಯೆ ಹೆಚ್ಚಿದ್ದು, ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕಿದೆ. ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತ ಎಂದು ಹೇಳಿಕೊಳ್ಳುವವರಿದ್ದಾರೆ ಎಂದು ಕಾ.ಪ.ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು. ನಗರದ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.