ಮಂಡ್ಯ ನಗರ ಸಂಪೂರ್ಣ ಕನ್ನಡಮಯವಾಗಿಸಿ: ಶಾಸಕ ಪಿ.ರವಿಕುಮಾರ್
Dec 06 2024, 08:59 AM ISTಮಂಡ್ಯ ನಗರದಲ್ಲಿನ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲಾಗುವುದು. ಇದರ ಜೊತೆಗೆ ಪ್ರಮುಖ ವೃತ್ತಗಳು, ರಸ್ತೆಗಳ ಅಕ್ಕಪಕ್ಕ, ವಾಣಿಜ್ಯ ಮಳಿಗೆಗಳ ಮೇಲೂ ಕನ್ನಡ ಬಾವುಟ ಹಾರಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು.