ಸಾಂಪ್ರದಾಯಿಕ ದಿರಿಸಿನಲ್ಲಿ ದೇವಸ್ಥಾನ ಪ್ರವೇಶಿಸಿದ ದರ್ಶನ್, ಕುಟುಂಬ ಮಧ್ಯಾಹ್ನ ವರೆಗೆ ಶತ್ರು ಸಂಹಾರ ಪೂಜೆ(ಯಾಗ) ನೆರವೇರಿಸಿತು. ಮಹಾಪೂಜೆ ವೇಳೆ ಸಂಕಲ್ಪ ಮಾಡಿ ನಂತರ ಪ್ರಸಾದ ಸ್ವೀಕರಿಸಿದರು.
ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಮೇಲಿರುವ ನಟ ದರ್ಶನ್‌ಗೆ ಮೈಸೂರಿಗೆ ಹೋಗಲು ಮತ್ತೆ ಅನುಮತಿಸಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆದೇಶಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್ ಜಾರಿ ಮಾಡಿದೆ.
ಬೆನ್ನು ನೋವಿನ ಕಾರಣಕ್ಕೆ ಆಸ್ಪತ್ರೆ ಸೇರಿದ್ದ ಕೊಲೆ ಆರೋಪಿ ನಟ ದರ್ಶನ್ ಬುಧವಾರ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಳಗ್ಗೆ 10.30ಕ್ಕೆ ಪ್ರಕ್ರಿಯೆಗಳನ್ನು ಮುಗಿಸಿದ ನಂತರ ತಮ್ಮ ಪುತ್ರ ವಿನೀಶ್ ಹಾಗೂ ನಟ ಧನ್ವೀರ್ ಜತೆಗೂಡಿ ದರ್ಶನ್ ಆಸ್ಪತ್ರೆಯಿಂದ ತೆರಳಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಸೋಮವಾರ ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ಗೆ ಹಾಜರಾಗಿ ಜಾಮೀನು ಷರತ್ತುಗಳನ್ನು ಪೂರೈಸಿದರು.
ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಧಿಸಿದ್ದು ಸಂಜೆ ವೇಳೆಗೆ ಅವರಿಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಬಿಡುಗಡೆ ಹೊಂದಿದ್ದಾರೆ.
ಮಧ್ಯಂತರ ಜಾಮೀನು ಪಡೆದು ಐದು ವಾರವಾದರೂ ಚಿಕಿತ್ಸೆ ಪಡೆದಿಲ್ಲ. ತನ್ಮೂಲಕ ನ್ಯಾಯಾಲಯದ ಅನುಕಂಪ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ರದ್ದುಪಡಿಸಬೇಕು. ಹೀಗಂತ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಶುಕ್ರವಾರ ಬಲವಾಗಿ ವಾದ ಮಂಡಿಸಿದರು.
ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.