'ನನ್ನ ಅಭಿಮಾನಿ ಮಾತನಾಡಿ ಎಂದು ಒತ್ತಾಯಿಸಿದ್ದಕ್ಕೆ ವಿಧಿ ಇಲ್ಲದೆ ಮೊಬೈಲ್‌ನಲ್ಲಿ ಮಾತನಾಡಿದೆ. ನಾನು ಯಾವತ್ತೂ ಜೈಲಿನಲ್ಲಿ ಮೊಬೈಲ್ ಬಳಸಿಲ್ಲ' ಎಂದು ನಟ ದರ್ಶನ್ ತಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಲೆ ಪ್ರಕರಣ ಎದುರಿಸುತ್ತಿರುವ ನಟ ದರ್ಶನ್‌ಗೆ ಒಳಿತಾಗಲಿ ಎಂದು ಹಾರೈಸಿ ಅವರ ಅಭಿಮಾನಿಗಳು ನಗರದ ಅಧಿದೇವತೆ ಶ್ರೀ ಕನಕದುರ್ಗಮ್ಮ ದೇವಿಗೆ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಸಮರ್ಪಿಸಿದರು.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಒಬ್ಬಂಟಿಯಾದಂತಾಗಿದ್ದು, ತೀವ್ರ ಮಂಕಾಗಿದ್ದಾರೆ. ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ.