ನಟ ದರ್ಶನ್ ಕೇಸ್ನಲ್ಲಿ ನನ್ನ ಪಾತ್ರ ಏನೂ ಇಲ್ಲ. ಯಾರೂ ನನ್ನ ಹೆಸರು ಹೇಳಿಲ್ಲವಾದರೂ, ಇನ್ಡೈರೆಕ್ಟ್ ಆಗಿ ನಾನೇ ಸಪೋರ್ಟ್ ಮಾಡಿದ್ದೆ ಎನ್ನುವ ಹಾಗೆ ಮಾಧ್ಯಮಗಳಲ್ಲಿ ಸುದ್ದಿ ಬಂತು. ನಾನು ಹಾಗೂ ದರ್ಶನ್ ಇಬ್ಬರೂ ಸ್ನೇಹಿತರು, ಇಲ್ಲ ಅಂತ ಅಲ್ಲ. ಆದರೆ ಈ ರೀತಿ ಮಾಡಿದಾಗ ಯಾರು ಸಪೋರ್ಟ್ ಮಾಡ್ತಾರೆ?
ದರ್ಶನ್ಮನೆಯಲ್ಲಿ 37,40,000 ಲಕ್ಷ ನಗದನ್ನು ಜಪ್ತಿ ಮಾಡಲಾಗಿದ್ದು, ಪತ್ನಿ ವಿಜಯಲಕ್ಷ್ಮಿ ನಿವಾಸದಲ್ಲಿ 3 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಗಳಿಗೆ 30 ಲಕ್ಷ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅಭಿಮಾನಿಗಳ ಹೆಸರಿನಲ್ಲಿ 50ಕ್ಕೂ ಹೆಚ್ಚು ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಠಾಣೆ ಪೊಲೀಸರಿಗೆ ನಟ ಪ್ರಥಮ್ ಬುಧವಾರ ದೂರು ನೀಡಿದ್ದಾರೆ.
ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ನಟ ಚಿಕ್ಕಣ್ಣ ಅವರನ್ನು ಸುಮಾರು ಎರಡು ತಾಸು ಅಧಿಕ ಸಮಯ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.
ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪುನಃ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.