ನದಿ ಪಾತ್ರದ ಪ್ರದೇಶಗಳಲ್ಲಿ ಡಿಸಿ ಪರಿಶೀಲನೆ
Jul 18 2024, 01:37 AM ISTಕನ್ನಡಪ್ರಭ ವಾರ್ತೆ ಬೆಳಗಾವಿನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿ ಪಾತ್ರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೆಳಗಾವಿ ತಾಲೂಕಿನ ಸುತಗಟ್ಟಿ ಬಳಿಯ ಘಟಪ್ರಭಾ ನದಿಯ ಸೇತುವೆ ಬಳಿ ನದಿಯ ಒಳಹರಿವು ಪ್ರಮಾಣ ಹಾಗೂ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.