ಅಘನಾಶಿನಿ ನದಿ ಉಳಿಸಿ ಹೋರಾಟ ಮುಂದುವರಿಸಲು ನಿರ್ಧಾರ
Nov 14 2023, 01:15 AM ISTಅಘನಾಶಿನಿ ನದಿ ಉಳಿಸಿ ಹೋರಾಟವನ್ನು ದಿಟ್ಟವಾಗಿ ಮುಂದುವರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಟ್ಟಣದ ಹವ್ಯಕ ಸಭಾಭವನದಲ್ಲಿ ನಡೆದ ಅಘನಾಶಿನಿ ನದಿ ಹೋರಾಟ ಸಮಿತಿಯ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಅಘನಾಶಿನಿ ನದಿ ಹೋರಾಟದ ಮುಂದಾಳತ್ವ ವಹಿಸಿದ್ದ ಟಿ.ಪಿ. ಹೆಗಡೆ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಸಮಿತಿ ಸಭೆ ನಡೆಸಿತು.